Skip to main content


ಸಿಂಧೂರಿ ವಿರುದ್ಧ ಎ. ಮಂಜು ಚುನಾವಣಾಧಿಕಾರಿಗೆ ಪತ್ರ

ನೀತಿ ಸಂಹಿತೆ ಉಲ್ಲಂಘಿಸದೆ ಇದ್ದರೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತನ್ನ ಮೇಲೆ ಎಫ್ ಐಆರ್ ದಾಖಲಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗೆ ಎ. ಮಂಜು ಅವರು ಪತ್ರ ಬರೆದಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಎ.ಮಂಜು ಅವರು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಝಾ ಅವರಿಗೆ ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿ ಅವರು ತನ್ನ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ದಾಖಲಿಸಿದ್ದಾರೆ. ನಾನು ಯಾವುದೇ ರೀತಿಯಿಂದಲೂ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲವೆಂದು ಮಂಜು ಅವರು ತನ್ನ ಪತ್ರದಲ್ಲಿ ಹೇಳಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಬದಲಾಯಿಸಬೇಕೆಂದು ಮಂಜು ಅವರು ಮನವಿ ಮಾಡಿಕೊಂಡಿದ್ದಾರೆ.     

short by Pawan / read more at News Kannada

Comments