Skip to main content


ಪಾರದರ್ಶಕ ಚುನಾವಣೆ ನಡೆಸಲು ಆಯೋಗ ಬದ್ಧ : ಓ.ಪಿ.ರಾವತ್

ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಪೂರ್ವ ಸಿದ್ಧತೆ ಪರಿಶೀಲನೆಗಾಗಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಪರಿಶೀಲನೆ ಬಳಿಕ ಶುಕ್ರವಾರ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. 'ಚುನಾವಣಾ ಆಯೋಗವು ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳಿಗೆ ನಿರ್ಭೀತರಾಗಿ, ನಿಷ್ಪಕ್ಷಪಾತರಾಗಿ, ಯಾವುದೇ ಪೂರ್ವಾಗ್ರಹವಿಲ್ಲದೆ, ಪ್ರಭಾವಗಳಿಗೆ ಒಳಗಾಗದೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದೆ. ಇದನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ' ಎಂದು ಸ್ಪಷ್ಟಪಡಿಸಿದರು.              

short by NP / read more at Oneindia

Comments