Skip to main content


ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ದೋಷಿ; ಸೈಫ್, ಸೊನಾಲಿ, ಟಬು ಖುಲಾಸೆ

20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ರಾಜಸ್ತಾನದ ಜೋಧ್ಪುರ ನ್ಯಾಯಾಲಯದ ಪ್ರಕಟಿಸಿದ್ದು, ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು, ಸಲ್ಮಾನ್ ಮಾತ್ರವೇ ಅಲ್ಲದೇ, ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರ, ನೀಲಂ ಕೂಡ ಆರೋಪಿಗಳಾಗಿದ್ದಾರೆ. ಎಲ್ಲಾ ಆರೋಪಿಗಳು ಇಂದು ಜೋಧ್ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಇದರಂತೆ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ೫ ವರ್ಷ ಜೈಲು ಶಿಕ್ಷೆಯನ್ನು ಘನ ನ್ಯಾಯಾಲಯ ಘೋಷಿಸಿದೆ. ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ.

short by Pawan / read more at Kannada Prabha

Comments