Skip to main content


ಇಂದು ದೇಶಾದ್ಯಂತ 11 ಭಾಷೆಗಳಲ್ಲಿ ನೀಟ್ ಎಕ್ಸಾಂ – ವಿದ್ಯಾರ್ಥಿಗಳಿಗೆ ಪ್ರತ್ಯೇಕ ಡ್ರೆಸ್‍ಕೋಡ್

ದೇಶಾದ್ಯಂತ ಇಂದು ಮೆಡಿಕಲ್ ಹಾಗೂ ದಂತ ವೈದ್ಯಕೀಯ ಸೀಟುಗಳಿಗೆ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ ಒಟ್ಟು 13,26,725 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕದಲ್ಲಿ 187 ಸೆಂಟರ್ ಗಳಿದ್ದು, ಬೆಂಗಳೂರು, ಬೆಳಗಾವಿ, ದಾವಣಗೆರೆ, ಗುಲ್ಬರ್ಗ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಉಡುಪಿ ಹಾಗೂ ಹೊಸದಾಗಿ ಧಾರವಾಡ ಕೇಂದ್ರಗಳಲ್ಲೂ ಪರೀಕ್ಷೆ ನಡೆಯಲಿದೆ. ಈ ಬಾರಿ 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಂದೇ ಮಾದರಿಯ ಪ್ರಶ್ನೆಪತ್ರಿಕೆಗಳನ್ನ ನೀಡಲಿದ್ದಾರೆ. ಪರೀಕ್ಷೆಗೆ ಅನೇಕ ವಸ್ತುಗಳನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಡ್ರೆಸ್ ಕೋಡ್ ಇದ್ದು, ವಿದ್ಯಾರ್ಥಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ.    

short by Pawan / more at Public Tv

Comments