Skip to main content


ನೀಟ್ ಪರೀಕ್ಷೆ ಬರೆದ 1.33 ಮಿಲಿಯನ್ ವಿದ್ಯಾರ್ಥಿಗಳು

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್‌ಇಇಟಿ) ಭಾನುವಾರ ದೇಶದಾದ್ಯಂತ ನಡೆಯಿತು. ದೇಶದಾದ್ಯಂತ 136 ನಗರಗಳಲ್ಲಿ 13 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಸುಮಾರು 2,000 ಕೇಂದ್ರಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಪರೀಕ್ಷೆ ನಡೆಯಿತು. ಎನ್‌ಇಇಟಿ ಪರೀಕ್ಷೆ ಉತ್ತರಗಳನ್ನು ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಇದೇ ತಿಂಗಳು ಬಿಡುಗಡೆ ಮಾಡಲಿದೆ. ಜೂನ್ 5ರಂದು ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.       

short by NP / more at Oneindia

Comments