Skip to main content


ವ್ಯಕ್ತಿಯ ಮೇಲೆ ದಾಳಿ – 1.4 ಲಕ್ಷ ರೂ. ದೋಚಿತು ವಾನರಪಡೆ!

ಬ್ಯಾಂಕಿಗೆ ಹಣ ಜಮಾ ಮಾಡಲು ಹೋದ ವ್ಯಕ್ತಿಯ ಮೇಲೆ ಕೋತಿಗಳು ದಾಳಿ ಮಾಡಿ ಹಣದ ಬ್ಯಾಗ್ ಅನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉತ್ತರಪ್ರದೇಶದ ನೈಕಿ ಮಂಡಿ ಪ್ರದೇಶದಲ್ಲಿ ನಡೆದಿದೆ. ಸೋಮವಾರ ಬೆಳಿಗ್ಗೆ ಬನ್ಸಾಲಿ ಎಂಬುವರು ತಮ್ಮ ಪುತ್ರಿಯೊಡನೆ ನೈಕಿ ಮಂಡಿ ಪ್ರದೇಶದ ಇಂಡಿಯನ್ ಬ್ಯಾಂಕ್‍ಗೆ 2 ಲಕ್ಷ ರೂಪಾಯಿಯನ್ನು ಜಮಾ ಮಾಡಲು ಬಂದಿದ್ದಾರೆ. ಇವರು ಬ್ಯಾಂಕ್ ಹತ್ತಿರ ಬರುತ್ತಿದ್ದಂತೆ ಅಲ್ಲಿದ್ದ ಕೋತಿಗಳು ಇವರ ಮೇಲೆ ದಾಳಿ ಮಾಡಿ ಹಣದ ಬ್ಯಾಗ್ ಅನ್ನು ಕಿತ್ತುಕೊಂಡು ಅದರಲ್ಲಿದ್ದ ಸುಮಾರು 60 ಸಾವಿರ ಹಣವನ್ನು ಎಸೆದು ಉಳಿದ ಹಣದ ಸಮೇತ ಬ್ಯಾಗ್ ಅನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿವೆ. ಹಣ ಕಳೆದುಕೊಂಡ ಬನ್ಸಾಲಿಯವರು ಕೂಡಲೇ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ ಹಾಗೂ ಯಾವ ಪ್ರಕರಣ ಅಡಿಯಲ್ಲಿ ದೂರು ದಾಖಲು ಮಾಡಬೇಕೆಂದು ತಿಳಿಯದೆ ಅವರನ್ನು ಕಳುಹಿಸಿದ್ದಾರೆ.       

short by Pawan / more at Public Tv

Comments