Skip to main content


ಜೂನ್ 1 ರಿಂದ ದೇಶಾದ್ಯಂತ ಹಾಲು, ತರಕಾರಿ ಸರಬರಾಜು ಮಾಡದಿರಲು ರೈತರ ನಿರ್ಧಾರ!

ರೈತರು ವಿಧಿಸುವ ದರದಲ್ಲಿ ಹಾಲು ಮತ್ತು ತರಕಾರಿಯನ್ನು ಗ್ರಾಹಕರು ಖರೀದಿಸಬೇಕು ಎನ್ನುವ ನಿಟ್ಟಿನಲ್ಲಿ ವಿಶೇಷ ಪ್ರತಿಭಟನೆಯೊಂದು ಶುಕ್ರವಾರದಿಂದ ದೇಶದಲ್ಲಿ ಕಾಣಿಸಿಕೊಳ್ಳಲಿದೆ. ದೇಶದಲ್ಲಿ ಇಂಧನ ಬೆಲೆ ಹೆಚ್ಚಳವನ್ನು ವಿರೋಧಿಸಿ ರೈತ ಸಂಘಟನೆಗಳು ಈ ಪ್ರತಿಭಟನೆಗೆ ಮುಂದಾಗಿವೆ. ಪಂಜಾಬ್ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ರೈತರು ಜೂನ್ 1ರಿಂದ ಜೂನ್ 10 ರವರೆಗೆ ಪ್ರತಿಭಟನೆ ನಡೆಸಲಿದ್ದಾರೆ.

ಹತ್ತು ದಿನಗಳ ಕಾಲ ರೈತರು ಹಾಲು ಹಾಗೂ ತಾವು ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತರುವುದಿಲ್ಲ. ಹೀಗಾಗಿ ಗ್ರಾಹಕರು ರೈತರ ಬಳಿ ಹೋಗಿ ಅವರು ಹೇಳಿದ ದರ ನೀಡಿ ಖರೀದಿಸಬೇಕು ಎಂದು ರೈತರು ಹೇಳಿದ್ದಾರೆ. “ಗ್ರಾಮಗಳು ಮುಚ್ಚಿವೆ ಹಾಗೂ ರೈತರು ರಜೆಯಲ್ಲಿದ್ದಾರೆ” ಎನ್ನುವ ಘೋಷಣೆ ಮೇಲೆ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಪಂಜಾಬ್ ಘಟಕದ ಅಧ್ಯಕ್ಷ ಬಲ್ಬೀರ್ ಸಿಂಗ್ ರಾಜೇವಾಲ್ ಪ್ರತಿಭಟನೆ ಮುಂದಾಳತ್ವ ವಹಿಸಿದ್ದಾರೆ.   

short by Pawan / more at Public Tv

Comments