Skip to main content


BIG NEWS : 2009ರ ಏ.1ರಿಂದ 2017ರ ಡಿ.31ವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ

ರಾಜ್ಯದ ರೈತರು ಕೃಷಿಗಾಗಿ ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ಸಾಲ ಮನ್ನಾ ಸಂಬಂಧಪಟ್ಟಂತೆ ರೈತ ಮುಖಂಡರ, ಸಂಘಟನೆಗಳ ಸಭೆ ನಡೆಸಿದರು. ಸಭೆಯಲ್ಲಿ ಮುಕ್ತವಾದ ಚರ್ಚೆ ನಡೆಯಿತು.

ಕೊನೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, 2009ರ ಏಪ್ರಿಲ್ 1ರಿಂದ 2017ರ ಡಿಸೆಂಬರ್ 31ರವರೆಗೆ ಸಣ್ಣ ಮತ್ತು ಅತಿ ಸಣ್ಣ ರೈತರು ಮಾಡಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದರು. ಮುಂದಿನ 15 ದಿನದಲ್ಲಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಿ ರೈತರ ಮನೆ ಬಾಗಿಲಿಗೆ ಋಣ ಮುಕ್ತ ಪತ್ರವನ್ನು ಕಳುಹಿಸಲಾಗುವುದು ಎಂದು ಹೇಳಿದರು.   

short by Pawan / more at Eesanje

Comments