Skip to main content


ಬಿಗ್ ಬ್ರೇಕಿಂಗ್ : ಧೀಡಿರ್‌ ನಟ ಸುದೀಪ್ ರೋಡ್ ಶೋ ರದ್ದು! ಕಾರಣ ಏನು ಗೊತ್ತಾ?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ವಿವಿಧ ಭಾಷೆಗಳ ಸಿನಿಮಾ ಸ್ಟಾರ್ ಗಳ ದಂಡೇ ರಾಜ್ಯಕ್ಕೆ ಆಗಮಿಸಿ ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ವೇಳೆ ಇಂದು ನಟ ಸುದೀಪ್ ಬಳ್ಳಾರಿಯ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಪರ ಮೊಳಕಾಲ್ಮೂರಿನಲ್ಲಿ ಪ್ರಚಾರ ಮಾಡಿದ್ದಾರೆ. ಇದೇ ವೇಳೆ ಚುನಾವಣಾ ಅಧಿಕಾರಿಗಳ ಅನುಮತಿ ಸಿಗದ ಹಿನ್ನೆಲೆಯಲ್ಲಿ ನಟ ಸುದೀಪ್ ನ ನಾಯಕನಟ್ಟಿ ಪ್ರಚಾರ ಸಭೆಯನ್ನು ರದ್ದು ಮಾಡಿದ್ದಾರೆ. ಸುದೀಪ್ ನಾಯಕನಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದು ನಂತರ ಕೊಂಡ್ಲಹಳ್ಳಿಯಲ್ಲಿ ಪ್ರಚಾರಕ್ಕೆ ತೆರಳಬೇಕಿತ್ತು ಎನ್ನಲಾಗಿದೆ. ಇದೇ ವೇಳೆ ಆ ದೇಗುಲದ ಆವರಣದಲ್ಲಿ ಚುನಾವಣಾ ಅಧಿಕಾರಿಗಳು ಅನುಮತಿ ನೀಡದ ಕಾರಣ ನಾಯಕನಟ್ಟಿಯಲ್ಲಿ ರೋಡ್ ಶೋ ರದ್ದು ಮಾಡಿದ್ದಾರೆ. ಆದರೆ ಕಾಲೇಜು ಆವರಣದಲ್ಲಿ ಸಭೆಗೆ ಮಾತ್ರ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.    

short by Pawan / more at Kannada News Now

Comments