Skip to main content


ಚಿತ್ರರಂಗಕ್ಕೆ ನಾಯಕನಾಗಿ ಡಾ. ರಾಜ್ ಕುಮಾರ್ ಹೇಗೆ ಪಾದಾರ್ಪಣೆ ಮಾಡಿದ್ರು ಗೊತ್ತಾ..?

ಸಿಂಹ ಕಣ್ಣಪ್ಪನ ಪಾತ್ರಕ್ಕೆ ಹೊಸನಟನನ್ನು ಹುಡುಕುತ್ತಿದ್ದ ಸಮಯವದು. ಮುತ್ತರಾಜ್‌ ರವರನ್ನು ಕಂಡ ತಕ್ಷಣ "ಇವನನ್ನೇ ಕಣ್ಣಪ್ಪನಾಗಿ ಏಕೆ ಮಾಡಬಾರದು" ಎಂಬ ಭಾವನೆ ಮೂಡಿತ್ತು. ಮೈಸೂರಿನ ಟೌನ್‌ ಹಾಲಿನಲ್ಲಿ ಬೇಡರ ಕಣ್ಣಪ್ಪ ನಾಟಕ ಪ್ರದರ್ಶನವಿತ್ತು. ಅದ್ರಲ್ಲಿ ಮುತ್ತುರಾಜ್ ಕಣ್ಣಪ್ಪನ ಪಾತ್ರ ವಹಿಸುತ್ತಾರೆ ಎಂದು ಸಿಂಹರವರಿಗೆ ತಿಳಿಯಿತು. ಸಿಂಹ, ಆ ಕಾಲದ ಕನ್ನಡ ಚಿತ್ರ ರಂಗದ ನಿರ್ದೇಶಕರು.

ಆ ದಿನ, ಅರ್ಧಗಂಟೆ ನಾಟಕ ನೋಡಿ, ಮುತ್ತುರಾಜ್‌ ರವರ ತನ್ಮಯತೆಯ ಅಭಿನಯ ಕಂಡು ಸಿಂಹ ಸಂತೋಷ ಪಟ್ಟರು. ಗುಬ್ಬಿ ಕರ್ನಾಟಕ ಫಿಲಂಸ್ ನಿರ್ಮಿಸುತ್ತಿದ್ದ ಬೇಡರ ಕಣ್ಣಪ್ಪ ಚಿತ್ರದಲ್ಲಿನ ಕಣ್ಣಪ್ಪನ ಪಾತ್ರಕ್ಕೆ ಸೇರಿಸಿಕೊಂಡರು. ನಂತರ ಮುತ್ತುರಾಜ್ ಜಿ.ವಿ.ಅಯ್ಯರ್ ಹಾಗೂ ನರಸಿಂಹರಾಜು ಇವರುಗಳನ್ನು 'ಸ್ಕ್ರೀನ್ ಟೆಸ್ಟ್' ಗೆ ಮದರಾಸಿಗೆ ಬರಲು ಆಹ್ವಾನಿಸಿದರು.

ನಿರ್ದೇಶಕ ಎಚ್.ಎಲ್.ಎನ್.ಸಿಂಹ ಅವರಿಂದ ಮುತ್ತುರಾಜ್‌ ಗೆ-ರಾಜ್ ಕುಮಾರ್ ಎಂಬ ಹೊಸ ಹೆಸರಿನ ನಾಮಕರಣವಾಯಿತು. ರಾಜ್ ಕುಮಾರ್ ಬೇಡರ ಕಣ್ಣಪ್ಪ ಚಿತ್ರದ ನಾಯಕನಾಗಿ ಅಭಿನಯಿಸಿದರು. ಅಲ್ಲಿಂದ ಮತ್ತೆ ಹಿಂತುರಿಗೆ ನೋಡಲೇ ಇಲ್ಲ. ಅವ್ರು ಮಾಡಿದ ಚಿತ್ರಗಳೆಲ್ಲವೂ ಹಿಟ್​ ಆಗ್ತಾ ಹೋಯ್ತು.. ಬೇಡರ ಕಣ್ಣಪ್ಪ ಚಿತ್ರ ರಾಷ್ಟ್ರಪ್ರಶಸ್ತಿ ಪಡೆದ ಪ್ರಥಮ ಚಿತ್ರವಾಗಿ ಕನ್ನಡ ಚಿತ್ರರಂಗದಲ್ಲಿಯೇ ಒಂದು ಮೈಲಿಗಲ್ಲಾಯಿತು.       

short by Pawan / more at Balkani News

Comments