Skip to main content


ಮದ್ಯಪ್ರಿಯರಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುತ್ತದೆ ಎನ್ನುವುದು ಸಾಮಾನ್ಯ ವಿಚಾರವೇ. ನೀತಿ ಸಂಹಿತೆ ಜಾರಿಯಾದಾಗಿನಿಂದ ಅಪಾರ ಪ್ರಮಾಣದ ಹಣ, ಮದ್ಯವನ್ನು ಜಪ್ತಿ ಮಾಡಲಾಗಿದೆ. ಈಗಾಗಲೇ ಅಬಕಾರಿ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಮೀರಿ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಗಳ ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಕಾರಣದಿಂದ ಕೆಲವು ಕಡೆ ವಾಮಮಾರ್ಗಗಳ ಮೂಲಕ ಮದ್ಯ ಮಾರಾಟ ಮಾಡುತ್ತಿರುವ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಮದ್ಯ ಪ್ರಿಯರಿಗೆ ಮತ್ತೊಂದು ಸುದ್ದಿ ಇಲ್ಲಿದೆ. ವಿಧಾನಸಭೆ ಚುನಾವಣೆ ಮತದಾನ ನಡೆಯುವ ಕಾರಣದಿಂದ ಮೇ 10 ರಂದು ಸಂಜೆ 5 ಗಂಟೆಯಿಂದ ಮೇ 12 ರಂದು ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ದಿನವಾದ ಮೇ 15 ರಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಮತದಾನದ ಸಂದರ್ಭದಲ್ಲಿ ಮದ್ಯದ ಹಂಚಿಕೆ ಜಾಸ್ತಿಯಾಗಲಿರುವ ಕಾರಣಕ್ಕೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅದೇ ರೀತಿ ಫಲಿತಾಂಶದ ದಿನದಂದು ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ.               

Short by Prajwal / more at Kannada Dunia

Comments