Skip to main content


ಬಂದ್ ಗೆ ರಾಜ್ಯದೆಲ್ಲೆಡೆ ನೀರಸ ಪ್ರತಿಕ್ರಿಯೆ - ಬಿಜೆಪಿಗೆ ಮುಖಭಂಗ

ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ಬೆಂಗಳೂರು ಹೊರತುಪಡಿಸಿ ರಾಜ್ಯದೆಲ್ಲೆಡೆ ಸೋಮವಾರ ವಿಪಕ್ಷ ಬಿಜೆಪಿ ಪ್ರೇರಿತ ಬಂದ್ ಗೆ ರಾಜ್ಯದಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿಯ ಪ್ರತಿಭಟನೆಗೆ ಮಾತ್ರ ಬಂದ್ ಸೀಮಿತವಾಗಿದೆ.

ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ, ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರಕಾರ ಬಹುಮತ ಸಾಬೀತುಪಡಿಸಿದ ದಿನವೇ ರೈತರ ಸಾಲಮನ್ನಾ ಘೋಷಿಸದಿದ್ದಲ್ಲಿ ಸೋಮವಾರ ಬಂದ್ ಹಮ್ಮಿಕೊಳ್ಳಲಾಗುವುದು ಎಂದು ವಿಪಕ್ಷ ನಾಯಕ ಯುಡಿಯೂರಪ್ಪ ಹೇಳಿದ್ದರು. ಅದರಂತೆ ಬಿಜೆಪಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿತ್ತು. ಆದರೆ ಈ ಬಂದ್ ಗೆ ರೈತ ಸಂಘಟನೆ, ಕನ್ನಡ ಪರ ಸಂಘಟನೆಗಳು ಚಿತ್ರೋಧ್ಯಮ , ಹೊಟೇಲ್ ಉದ್ಯಮ ಖಾಸಗಿ ಶಾಲಾಆಡಳಿತ ಮಂಡಳಿ ಹೀಗೆ ಹಲವು ಸಂಘಟನೆಗಳು ಬೆಂಬಲವನ್ನು ವ್ಯಕ್ತಪಡಿಸಿರಲಿಲ್ಲ.       

short by Pawan / more at Daijiworld

Comments