Skip to main content


ಶ್ರೀರಾಮುಲು ಪರ ‘ರಾಜಾಹುಲಿ’, ಸಿ.ಎಂ. ಪರ ‘ಹೆಬ್ಬುಲಿ’ ಪ್ರಚಾರ

ರಾಕಿಂಗ್ ಸ್ಟಾರ್ ಯಶ್ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ಪ್ರಚಾರ ನಡೆಸಿದ್ದಾರೆ. ಜೆ.ಡಿ.ಎಸ್., ಬಿ.ಜೆ.ಪಿ. ಅಭ್ಯರ್ಥಿಗಳ ಪರವಾಗಿ ಈಗಾಗಲೇ ಪ್ರಚಾರ ನಡೆಸಿರುವ ಅವರು, ಇಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಶ್ರೀರಾಮುಲು ಪರವಾಗಿ ಯಶ್ ಪ್ರಚಾರ ನಡೆಸಲಿದ್ದಾರೆ. ಸಿ.ಎಂ. ಸಿದ್ಧರಾಮಯ್ಯ ಅವರ ಪರವಾಗಿ ಕಿಚ್ಚ ಸುದೀಪ್ ಪ್ರಚಾರ ನಡೆಸಲು ಒಪ್ಪಿದ್ದಾರೆ. ಸಿ.ಎಂ. ಸ್ಪರ್ಧಿಸಿರುವ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸುದೀಪ್ ಮೇ 7, 8 ರಂದು ಪ್ರಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.        

short by NP / more at Public Vibe

Comments