Skip to main content


ನಿರೂಪಕ ಚಂದನ್ ಸಾವಿನ ಬಳಿಕ ಮಗನ ಕತ್ತು ಕೊಯ್ದು, ಆ್ಯಸಿಡ್ ಕುಡಿದ ಪತ್ನಿ

ಇತ್ತೀಚೆಗಷ್ಟೆ ಅಪಘಾತದಲ್ಲಿ ಸಾವನ್ನಪ್ಪಿದ ನಿರೂಪಕ ಚಂದನ್ ಅವರ ಪತ್ನಿ ಮೀನಾ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಮಗ ತುಷಾರ್‍ನ ಕತ್ತು ಕೊಯ್ದು ಕೊಲೆ ಮಾಡಿ, ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಂದನ್ ಮಗ ತುಷಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ತೀವ್ರವಾಗಿ ಮನನೊಂದಿದ್ದ ಮೀನಾ ಏನಾದ್ರೂ ಮಾಡಿಕೊಳ್ಳಬಹುದೆಂದು ಆಕೆಯ ಅಣ್ಣ ಮತ್ತು ತಂದೆ ಒಂದು ವಾರದಿಂದ ಕಾವಲು ಕಾಯುತ್ತಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮೀನಾ ಮಗನನ್ನು ಕೊಲೆಗೈದಿದ್ದಾರೆ.   

short by Pawan / more at Public Tv


Comments