Skip to main content


ಬಿಗ್ ಬ್ರೇಕಿಂಗ್ : ಬಂಧನದ ಭೀತಿ, ನಟ ದುನಿಯಾ ವಿಜಯ್ ನಾಪತ್ತೆ, ಮೊಬೈಲ್ ಸ್ವಿಚ್ ಆಫ್!

ಮಾಸ್ತಿಗುಡಿ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್‌ನಿಂದ ನೀರಿಗೆ ಹಾರಿ ಸಾವನ್ನಪ್ಪಿದ್ದ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 353(ಪೊಲೀಸರ ಕರ್ತವ್ಯಕ್ಕೆ ಅಡ್ಡಿ), ಸೆಕ್ಷನ್ 225(ಆರೋಪಿಯ ಬಂಧನಕ್ಕೆ ಅಡ್ಡಿ) ಪ್ರಕರಣಗಳು ಜಾಮೀನು ಸಿಗುವ ಕೇಸ್ ಆಗಿದ್ದರೂ ದುನಿಯಾ ವಿಜಯ್ ಪರಾರಿಯಾಗಿದ್ದಾರೆ. ಈಗ ವಿಜಯ್ ಪರಾರಿಯಾಗಿರುವ ಕಾರಣ ಪ್ರಕರಣ ಮತ್ತಷ್ಟು ಜಟಿಲವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.     

short by Pawan / more at Kannada News Now

Comments