Skip to main content


ಎಚ್‍ಡಿಕೆ ಪ್ರಮಾಣವಚನದ ಟೈಮ್ ಮತ್ತೆ ಬದಲು - ಸಮಾರಂಭಕ್ಕೆ ಮಳೆ ಅಡ್ಡಿ ಸಾಧ್ಯತೆ

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಗದ್ದುಗೆ ಏರಲು ಹೊರಟ ಎಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಒಂದಲ್ಲಾ ಒಂದು ವಿಘ್ನ ಎದುರಾಗ್ತಾನೇ ಇದೆ. ಈಗಾಗಲೇ ಎರಡ್ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸುವ ಸ್ಥಳ ಬದಲಿಸಿದ ನಂತರ ಇದೀಗ ಸಮಯವನ್ನೂ ಬದಲಿಸಲಾಗಿದೆ. ಬುಧವಾರ ಮಧ್ಯಾಹ್ನ 12.20ಕ್ಕೆ ಬದಲಾಗಿ ಸಂಜೆ 4 ಗಂಟೆಯ ನಂತರ ಎಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ 10 ಗಂಟೆಗೆ ಸಮಯ ಚೆನ್ನಾಗಿದ್ರೂ ಸಂಜೆಯ ವೇಳೆ ನವಮಿ ಪೂರ್ವ ಪಲ್ಗುಣಿ ಅಮೃತ ಸಿದ್ಧಿ ಯೋಗವಿದೆ. ಈ ಸಮಯದಲ್ಲಿ ಅಸ್ಥಿರತೆ, ಚಂಚಲತೆ ಇರಲ್ಲ. ಹೀಗಾಗಿ ಮೈತ್ರಿ ಸರ್ಕಾರವೂ ಚಂಚಲವಾಗದೆ, ಸ್ಥಿರವಾಗಿರಲಿ ಎಂದು ಎಚ್‍ಡಿಕೆ ಈ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸ್ತಿದ್ದಾರೆ ಅನ್ನೋದು ಹಿರಿಯ ಜ್ಯೋತಿಷಿಗಳ ಅಭಿಪ್ರಾಯ. ಇದರ ಜೊತೆಗೆ ಪ್ರಮಾಣ ವಚನಕ್ಕೆ ವರುಣ ಅಡ್ಡಿಪಡಿಸಲಿದ್ದಾನೆ. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇ 30ರಂದು ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಡಲಿದ್ದು ಮುಂಗಾರು ಪೂರ್ವ ಮಳೆ ಬುಧವಾರ ಗುರುವಾರ ಅಬ್ಬರಿಸಲಿದೆ ಅಂತಾ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಎಚ್ಚರಿಕೆ ರವಾನಿಸಿದ್ದಾರೆ.    

short by Pawan / more at Public Tv

Comments