Skip to main content


ಈ ಕಾರಣಕ್ಕೆ ಈ ಬಾರಿ ನೋಬೆಲ್‌ ಸಾಹಿತ್ಯ ಪ್ರಶಸ್ತಿ ನೀಡುತ್ತಿಲ್ಲ!

ಈ ಬಾರಿ ಸಾಹಿತ್ಯ ಕ್ಷೇತ್ರಕ್ಕೆ ನೀಡಲಾಗುವ ನೋಬೆಲ್ ಪ್ರಶಸ್ತಿಯನ್ನು ನೀಡಲಾಗುವುದಿಲ್ಲ ಎಂದು ಸ್ವೇಡಿಸ್‌ ಅಕಾಡೆಮಿ ಹೇಳಿದೆ. ಹೌದು, ಪ್ರಶಸ್ತಿ ಆಯ್ಕೆ ಸಮಿತಿ ವಿರುದ್ಧ ಕೇಳಿ ಬಂದ ಲೈಂಗಿಕ ಕಿರುಕುಳ ಆರೋಪಗಳ ಹಿನ್ನೆಲೆಯಲ್ಲಿ ಅಕಾಡೆಮಿ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಅಕಾಡೆಮಿ 2018ನೇ ಸಾಲಿನ ಸಾಹಿತ್ಯ ಪ್ರಶಸ್ತಿಯನ್ನು 2019ನೇ ಸಾಲಿನಲ್ಲಿ ನೀಡಲಾಗುವುದು ಎಂದಿದೆ. ಸ್ಟಾಕ್‌ ಹೋಮ್‌ನಲ್ಲಿ ನಡೆದ ವೀಕ್ಲಿ ಸಭೆಯಲ್ಲಿ ಅಕಾಡೆಮಿ ಸದಸ್ಯರು ಈ ನಿರ್ಧಾರ ಕೈಗೊಂಡಿದ್ದಾರೆ.    

short by Pawan / more at Kannada News Now

Comments