Skip to main content


ಮೆಜೆಸ್ಟಿಕ್ ಸಿನಿಮಾ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ

ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಬ್ರೇಕ್ ಕೊಟ್ಟಿದ್ದ ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ದೇಶಕ ಪಿ.ಎನ್.ಸತ್ಯ ಇಂದು ವಿಧಿವಶರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಸತ್ಯ ಅವರಿಗೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಶುಕ್ರವಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದ್ರೆ ಇಂದು ಸಂಜೆ ಲೋ ಬಿಪಿ ಆದ ಕಾರಣ ಕೊನೆ ಉಸಿರೆಳೆದಿದ್ದಾರೆ. ಬಸವೇಶ್ವರನಗರದ ಸತ್ಯವರ ಸೋದರಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗ್ತಿದೆ. ಮೆಜೆಸ್ಟಿಕ್, ಡಾನ್, ದಾಸ, ಸರ್ದಾರ ಹೀಗೆ 16 ಚಿತ್ರಗಳನ್ನು ಪಿ.ಎನ್.ಸತ್ಯ ನಿರ್ದೇಶಿಸಿದ್ದರು. ನಿರ್ದೇಶನ ಮಾತ್ರವಲ್ಲದೇ 21 ಚಿತ್ರಗಳಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದರು. ಮರಿ ಟೈಗರ್ ಸತ್ಯ ನಿರ್ದೇಶನದ ಕೊನೆಯ ಚಿತ್ರ.           

short by Pawan / more at Public Tv

Comments