Skip to main content


ಸಾಲಮನ್ನಾಗೂ ಮುನ್ನ ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸಿಎಂ

ರಾಜ್ಯದ ರೈತರ ಸಾಲಮನ್ನಾ ಮಾಡುವ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.  ಈ ಸಭೆಯಲ್ಲಿ ವಿವಿಧ ಜಿಲ್ಲೆಗಳ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದು, ತಮ್ಮ ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಿದ್ದಾರೆ. ಸಭೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದು, ಯಶಸ್ವಿನಿ ಯೋಜನೆಯನ್ನು ಈ ಹಿಂದಿನಂತೆ ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದ್ದಾರೆ.  ರೈತ ಮುಖಂಡ ಬಸವರಾಜಪ್ಪನವರು ಯಶಸ್ವಿನಿ ಯೋಜನೆಯನ್ನು ಹಿಂಪಡೆಯದಂತೆ ಮನವಿ ಮಾಡಿಕೊಂಡ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ತಾವು ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿ ಯಶಸ್ವಿನಿ ಯೋಜನೆಯನ್ನು ಮುಂದುವರಿಸಿಕೊಂಡು ಹೋಗುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.

short by Nithin / more at Kannadadunia

Comments