Skip to main content


ಪೆಟ್ರೋಲ್‌: ದೀರ್ಘಾವಧಿ ಪರಿಹಾರಕ್ಕೆ ಚಿಂತನೆ

ಸತತ 10ನೇ ದಿನವೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದು, ಈ ಬಿಕ್ಕಟ್ಟಿಗೆ ದೀರ್ಘಾವಧಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ನಿರಂತರ ಬೆಲೆ ಹೆಚ್ಚಳದಿಂದ ತತ್ತರಿಸಿರುವ ಬಳಕೆದಾರರಿಗೆ ತಕ್ಷಣ ಪರಿಹಾರ ಒದಗಿಸಲು ಎಕ್ಸೈಸ್‌ ಸುಂಕ ಕಡಿತಗೊಳಿಸಬೇಕೆಂಬ ಒತ್ತಡವು ಸರ್ಕಾರದ ಮೇಲೆ ಹೆಚ್ಚುತ್ತಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟವು ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. 'ಜಾಗತಿಕ ವಿದ್ಯಮಾನಗಳಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಬಗ್ಗೆ ಅನಿಶ್ಚಿತತೆ ತಲೆದೋರಿದೆ. ಈ ಬಗ್ಗೆ ತುರ್ತಾಗಿ ಗಮನ ಹರಿಸಬೇಕಾಗಿದೆ. ಈ ಬಿಕ್ಕಟ್ಟಿಗೆ ತಾತ್ಕಾಲಿಕ ಪರಿಹಾರದ ಬದಲಿಗೆ ದೀರ್ಘಾವಧಿ ಪರಿಹಾರ ಕಂಡುಕೊಳ್ಳುವ ಅಗತ್ಯ ಇದೆ. ಆ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ' ಎಂದು ಕಾನೂನು ಸಚಿವ ರವಿಶಂಕರ ಪ್ರಸಾದ್‌ ಅವರು ಹೇಳಿದ್ದಾರೆ. ಸಚಿವ ಸಂಪುಟದ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.      

short by Pawan / more at Prajavani

Comments