"ಟೂ+ ಒನ್ ಹಾಗೂ ಒನ್+ ಒನ್ ಎಂದು ಒಂದೇ ಕುಟುಂಬದವರಿಗೆ ಟಿಕೆಟ್ ನೀಡುವ ಹಾಗೂ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಬಿಜೆಪಿ ಮುಖಂಡರು ಕಾಂಗ್ರೆಸ್ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದಲ್ಲಿನ ಪರಿಸ್ಥಿತಿ ಅರಿತು ಮಾತನಾಡುವುದು ಸೂಕ್ತ ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, "ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರೇ ಸೋಲಿನ ಭೀತಿಯಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಗೋವಿಂದ ಕಾರಜೋಳ ಮಗ, ಶಶಿಕಲಾ ಜೊಲ್ಲೆ ಅವರ ಪತಿ, ಉಮೇಶ ಕತ್ತಿ ಸಹೋದರನಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ. ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಇದಕ್ಕೆ ಹೊರತಾಗಿಲ್ಲ. ತಮ್ಮ ಪಕ್ಷದಲ್ಲೇ ಟೂ ಪ್ಲಸ್ ಒನ್ ಹಾಗೂ ಒನ್ ಪ್ಲಸ್ ಒನ್ ಇರುವಾಗ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ' ಎಂದರು.
short by NP / more at Udayavani
Comments
Post a Comment