Skip to main content


ಸಂಪೂರ್ಣ ಸಾಲಮನ್ನಾಕ್ಕೆ ಆರ್ಥಿಕ ಇಲಾಖೆಯಿಂದ ಕೊಕ್ಕೆ: ಷರತ್ತು ವಿಧಿಸಿ ಎಂದ ಅಧಿಕಾರಿಗಳು

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸಂಪೂರ್ಣ ಸಾಲ ಮನ್ನಾ ಮಾಡಲು ಆಸಕ್ತಿ ತೋರಿಸಿದರೆ ರಾಜ್ಯದ ಆರ್ಥಿಕ ಇಲಾಖೆ ಈ ಆಸೆಗೆ ಕೊಕ್ಕೆ ಹಾಕಿದೆ. ಹೌದು, ರೈತರ ಸಂಪೂರ್ಣ ಸಾಲಮನ್ನಾ ಮಾಡಿದರೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಲಮನ್ನಾ ಮಾಡುವ ಸಂಬಂಧ ಆರ್ಥಿಕ ಇಲಾಖೆಯ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಈ ವೇಳೆ 54 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ಸಾಧ್ಯವಿಲ್ಲ. ಸಾಲಮನ್ನಾಗೆ ಷರತ್ತುಗಳನ್ನು ಹಾಕಬೇಕು, ಸಂಪೂರ್ಣ ಸಾಲಮನ್ನಾ ಮಾಡಲು ಹೋದರೆ ಸರ್ಕಾರ ನಡೆಸುವುದು ಕಷ್ಟ. ಕಳೆದ ಸರ್ಕಾರದ ವೇಳೆಯೂ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು ಈಗಲೂ ವಿತ್ತೀಯ ಶಿಸ್ತಿದೆ. ಆದರೆ ಸದ್ಯದ ಆರ್ಥಿಕ ಸ್ಥಿತಿಯೊಳಗೆ 54 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.   

short by Pawan / more at Public Tv

Comments