Skip to main content


ಚಿರು-ಮೇಘನಾ ವಿವಾಹ ಇಂದು

ಸ್ಯಾಂಡಲ್​ವುಡ್​ನ ತಾರಾ ಜೋಡಿ ಚಿರಂಜೀವಿ ಸರ್ಜಾ-ಮೇಘನಾ ರಾಜ್ ಭಾನುವಾರದಂದು (ಏ.29) ಸರಳವಾಗಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. ಈಗ ಹಿಂದು ಸಂಪ್ರದಾಯದ ಪ್ರಕಾರ ಮದುವೆಗೆ ಸಿದ್ಧತೆ ನಡೆಸಿದ್ದು, ಇಂದು (ಮೇ 2) ಅರಮನೆ ಮೈದಾನದ 3ನೇ ಗೇಟ್​ನ ವೈಟ್ ಪೆಟಲ್ಸ್​ನಲ್ಲಿ ವಿವಾಹ ಸಮಾರಂಭ ನೆರವೇರಲಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಸಿನಿಮಾರಂಗದ ಅನೇಕರು ತಾರಾ ಜೋಡಿಯ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಬುಧವಾರ ಬೆಳಗ್ಗೆ 10.30ರಿಂದ 11ರವರೆಗೆ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಸರ್ಜಾ ಕುಟುಂಬದ ಸಂಪ್ರದಾಯದಂತೆ ಮಾಂಗಲ್ಯಧಾರಣೆ ನಡೆಯಲಿದೆ. ಸಂಜೆ 7ಗಂಟೆಗೆ ಅರಮನೆ ಮೈದಾನದಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ದಕ್ಷಿಣ ಭಾರತ ಚಿತ್ರರಂಗದ ಗಣ್ಯರು ಆಗಮಿಸಿ ನವಜೋಡಿಗೆ ಶುಭ ಹಾರೈಸಲಿದ್ದಾರೆ.          

short by Pawan / read more at Publicvibe

Comments