Skip to main content


ಬಿಜೆಪಿ ಮುಂದಿದೆ ಸವಾಲಿನ ಹಾದಿ..!

2014ರ ಲೋಕಸಭೆ ಚುನಾವಣೆಯ ಭರ್ಜರಿ ಗೆಲುವಿನ ಬಳಿಕ ಸಾಲುಸಾಲು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ದಿಗ್ವಿಜಯ ಸಾಧಿಸಿದ್ದ ಬಿಜೆಪಿಗೆ 2019ರ ಸಾರ್ವತ್ರಿಕ ಚುನಾವಣೆ ಎದುರಿಸುವುದು ಸುಲಭದ ಮಾತಲ್ಲ ಎಂಬುದು ಈ ಉಪ ಕದನದ ಫಲಿತಾಂಶ ತೋರಿಸಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ತಮ್ಮ ಕಾರ್ಯತಂತ್ರಗಳನ್ನು ಬದಲಿಸಿಕೊಳ್ಳುವ ಒತ್ತಡ ಸೃಷ್ಟಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಟ್ಟಾಗಿ ಒಂದು ಕ್ಷೇತ್ರಕ್ಕೆ ಒಬ್ಬ ಅಭ್ಯರ್ಥಿಯನ್ನಷ್ಟೇ ಕಣಕ್ಕಿಳಿಸಿದಲ್ಲಿ ಅದು ಬಿಜೆಪಿಗೆ ದೊಡ್ಡ ಹೊಡೆತ ಕೊಡುವುದರಲ್ಲಿ ಅನುಮಾನವೇ ಇಲ್ಲ. ಅದರಲ್ಲೂ ಅತಿದೊಡ್ಡ ರಾಜ್ಯ ಯುಪಿಯಲ್ಲಿ ಹಗೆತನ ಮರೆತು ಎಸ್ಪಿ ಹಾಗೂ ಬಿಎಸ್ಪಿ ಒಂದಾಗಿ ಲೋಕಸಭೆ ಚುನಾವಣೆ ಎದುರಿಸಿದಲ್ಲಿ ಅದು ಬಿಜೆಪಿಗೆ ಹಿನ್ನಡೆಯಾಗುವುದು ಖಚಿತ ಎನ್ನುತ್ತವೆ ವರದಿಗಳು. 

short by Shraman Jain / more at Vijaya Karnataka

Comments