Skip to main content


ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣವಚನ

ಮೇ 23-ಸಾವಿರಾರು ಸಂಖ್ಯೆಯ ಅಭಿಮಾನಿಗಳ ಹರ್ಷೋದ್ಘಾರ , ಮುಗಿಲು ಮುಟ್ಟಿದ ಜೈಕಾರದ ನಡುವೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ದೇವರು ಮತ್ತು ಕರ್ನಾಟಕ ಜನತೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದಲ್ಲಿ ಇಂದಿನಿಂದ ಕುಮಾರಪರ್ವ ಆರಂಭವಾಯಿತು. ವಿಧಾನಸೌಧ ಮುಂಭಾಗದಲ್ಲಿ ಸರಿಯಾಗಿ 4.30ಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು. ಕೇವಲ ಕೆಲವೇ ಕೆಲವು ನಿಮಿಷಗಳಲ್ಲಿ ನಡೆದ ಈ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಶಕ್ತಿ ಪ್ರದರ್ಶನ ಎಂದೇ ಹೇಳಲಾಗಿತ್ತು. ಕುಮಾರಸ್ವಾಮಿ ಮತ್ತು ಡಾ.ಜಿ.ಪರಮೇಶ್ವರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯದ ನಾನಾ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಜೈಕಾರ ಹಾಕಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಮೂರನೇ ಬಾರಿ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಈ ಹಿಂದೆ ಒಂದು ಬಾರಿ ದೇವೇಗೌಡರು ಮತ್ತೊಂದು ಬಾರಿ ಕುಮಾರಸ್ವಾಮಿ ಹಾಗೂ ಇಂದು ಅವರೇ ಸಮ್ಮಿಶ್ರ ಸರ್ಕಾರದ ನೇತೃತ್ವವನ್ನು ವಹಿಸಿಕೊಂಡು ಮುಖ್ಯಮಂತ್ರಿಯಾಗಿದ್ದಾರೆ.         

short by Pawan / more at Eesanje

Comments