Skip to main content


ಭೀಕರ ಅಪಘಾತ : ನಿರೂಪಕ ಚಂದನ್ ಸಾವು

ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿದ್ದ ಚಂದನ್ [ಚಂದ್ರಶೇಖರ್ ] ದಾವಣಗೆರೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಚಂದನ್ ಹಾಗೂ ಸಂತೋಷಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾವಣಗೆರೆಯ ಹನಗವಾಡಿಯ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತವಾಗಿದೆ.  ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ  ರಸ್ತೆ ಪಕ್ಕಕ್ಕೆ ನಿಂತ ಲಾರಿಗೆ ಕಾರ್ ಡಿಕ್ಕಿ ಸಂಭವಿಸಿದೆ.          

short by Pawan / more at Suvarna News

Comments