Skip to main content


ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ: 13ಕ್ಕೆ ಮುಂದೂಡಿಕೆ

ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪದಾಧಿಕಾರಿಗಳು ರಾಜೀನಾಮೆ ನೀಡುವುದನ್ನು ಜೂನ್‌ 13ಕ್ಕೆ ಮುಂದೂಡಿದ್ದಾರೆ.

‘ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿನ ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಎಂ.ಬಿ. ಪಾಟೀಲ ಅವರನ್ನು ಪಕ್ಷದ ಹೈಕಮಾಂಡ್‌ ಶುಕ್ರವಾರ ಸಂಜೆ ದಿಢೀರ್‌ ದೆಹಲಿಗೆ ಕರೆಸಿಕೊಂಡಿದೆ. ನಾವು ಕೆಪಿಸಿಸಿ ಕಚೇರಿಗೆ ಶನಿವಾರ ಹೋದರೆ ಪಕ್ಷದ ನಾಯಕರು ಸಿಗುವುದಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಅನಿವಾರ್ಯವಾಗಿ ಮುಂದೂಡಿದ್ದೇವೆ’ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.    

short by Pawan / more at Prajavani

Comments