Skip to main content


'ಪವರ್' ಕಳೆದುಕೊಂಡ ಡಿಕೆಶಿ: ಎಚ್.ಡಿ ರೇವಣ್ಣ ಮಡಿಲಿಗೆ ಇಂಧನ ಖಾತೆ!

ಬಿಜೆಪಿಯ ಕುದುರೆ ವ್ಯಾಪಾರದಿಂದ ಕಾಂಗ್ರೆಸ್ ಶಾಸಕರನ್ನು ರಕ್ಷಿಸಲು ಡಿ,ಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದರು ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಇಂಧನ ಖಾತೆ ನೀಡಲು ನಿರಾಕರಿಸಲಾಗಿದೆ. ಇಂಧನ ಖಾತೆ ಮರಳಿ ಪಡೆಯಲು ಶಿವಕುಮಾರ್ ಪಟ್ಟ ಪ್ರಯತ್ನ ವ್ಯರ್ಥವಾಗಿದೆ. ಇಂಧನ ಖಾತೆ ಜೆಡಿಎಸ್ ಪಾಲಾಗಿದ್ದು, ಮುಖ್ಯಮಂತ್ರಿ ಕುಮಾರ ಸ್ವಾಮಿ ಸಹೋದರ ಎಚ್.ಡಿ ರೇವಣ್ಣ ಆ ಖಾತೆ ವಹಿಸಿಕೊಳ್ಳುವ ಸಾಧ್ಯತೆಯಿದೆ.

ಇಂಧನ ಖಾತೆಗಾಗಿ ಕಳೆದ ಕೆಲವು ದಿನಗಳಿಂದ ರೇವಣ್ಣ ಮತ್ತು ಡಿಕೆಶಿ ಲಾಬಿ ನಡೆಸಿದ್ದರು. ಆದರೆ ತಾವು ಯಾವುದೇ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ ಎಂದು ಡಿಕೆಶಿ ಹೇಳಿದ್ದಾರೆ, ಆಧರೆ ಅವರು ಇಂಧನ ಖಾತೆ ಪಡೆಯಲು ಹಲವು ರೀತಿಯ ಪ್ರಯತ್ನ ಪಟ್ಟಿದ್ದರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ. ಹಣಕಾಸು ಖಾತೆ ಜೆಡಿಎಸ್ ಗೆ ಎಂದು ತೀರ್ಮಾನವಾಗಿತ್ತು, ಆದರೆ ಶುಕ್ರವಾರ ಮಧ್ಯಾಹ್ನದವರೆಗೂ ಇಂಧನ ಖಾತೆ ಯಾರಿಗೆ ಎಂಬ ಗೊಂದಲವಿತ್ತು, ಆದರೆ ಅಂತಿಮವಾಗಿ ರಾಹುಲ್ ಗಾಂಧಿ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿದಿದೆ. ಇಂಧನ ಖಾತೆ ಸಿಗದಿದ್ದಕ್ಕೆ ಶಿವಕುಮಾರ್ ಮುಖದಲ್ಲಿ ಅಸಮಾಧಾನ ಎದ್ದು ಕಾಣುತ್ತಿತ್ತು.    

short by Pawan / more at Kannada Prabha

Comments