Skip to main content


ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬಾಗಲಕೋಟೆ, ಹಾವೇರಿ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಹವಾಮಾನ ಇಲಾಖೆಯ ಅಧಿಕಾರಿಗಳು ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದೆ.

ಇತ್ತೀಚಿಗೆ ಮಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಹೆಚ್ಚು ಹಾನಿಯಾಗಿತ್ತು. ಇದೇ ರೀತಿ ಮತ್ತೊಮ್ಮೆ ಮಳೆ ಸುರಿಯಲಿದೆ. ಹೀಗಾಗಿ ಈ ಬಾರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.   

short by Pawan / more at Kannada News Now

Comments