Skip to main content


ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಬಿಗ್ ಶಾಕ್!

ನವದೆಹಲಿ : ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ದೊರಕಿದೆ. ಆರ್ ಬಿಐ ಇದೀಗ ತನ್ನ ರೆಪೋ ದರ 4 ವರ್ಷದ ಬಳಿಕ ಏರಿಕೆ ಮಾಡಿದೆ. 6 ರಿಂದ 6.5ಕ್ಕೆ ಏರಿಕೆ ಮಾಡಿದ್ದಾಗಿ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಮಾಹಿತಿ ನೀಡಿದ್ದಾರೆ. ಇದೀಗ ಬ್ಯಾಂಕ್ ಗಳ ರೆಪೋ ದರವನ್ನು ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ ನೀಡುವ ಗೃಹ ಸಾಲ ಹಾಗೂ ಅದರ ಬಡ್ಡಿ ದರ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ರಿಸರ್ವ್ ಬ್ಯಾಂಕ್ ಇತರೆ ಬ್ಯಾಂಕ್ ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರವನ್ನು ರೆಪೋ ದರ ಎನ್ನಲಾಗುತ್ತದೆ

short by Shraman / more at Suvarna News

Comments