Skip to main content


ಡೆಲ್ಲಿಗೆ ಬರಬೇಡಿ: ಡಿಕೆಶಿ-ಸಿದ್ದರಾಮಯ್ಯಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿ 2 ವಾರಗಳು ಕಳೆದರೂ ಹೊಸ ಸರ್ಕಾರ ಸಚಿವ ಸಂಪುಟ ಕಸರತ್ತು ಬಗೆಹರಿದಿಲ್ಲ. ಚುನಾವಣೋತ್ತರ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ನಡುವೆ ಖಾತೆ ಹಂಚಿಕೆ ಕುರಿತ ಹಗ್ಗಾ-ಜಗ್ಗಾಟ ಬಗೆಹರಿದಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನದ ಲಾಬಿಗಾಗಿ ಡೆಲ್ಲಿಗೆ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ. 
ವಿವಿಧ ಸಚಿವ ಸ್ಥಾನಗಳಿಗೆ ಕಾಂಗ್ರೆಸ್ ಶಾಸಕರು ಸಾಕಷ್ಟು ಲಾಬಿ ನಡೆಸುತ್ತಿದ್ದು, ಸಂಪುಟ ವಿಸ್ತರಣೆ ಉಭಯ ಪಕ್ಷಗಳ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದೆ.    

short by Pawan / more at Suvarna News

Comments