Skip to main content


ಐದು ವರ್ಷ ಸರ್ಕಾರ ಸುಭದ್ರ: ಸಿಎಂ

ಎರಡೂ ಪಕ್ಷಗಳ ಕಾರ್ಯಕ್ರಮಗಳ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸುತ್ತೇವೆ. ಜನರ ವಿಶ್ವಾಸ ಗಳಿಸಿ, ಸಮ್ಮಿಶ್ರ ಸರ್ಕಾರದಿಂದ ಉತ್ತಮ ಆಡಳಿತ ನೀಡುತ್ತೇವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ಬಳಿಕ ಬುಧವಾರ ನಡೆದ ಮೊದಲ ಔಪಚಾರಿಕ ಸಂಪುಟ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಇಬ್ಬರೂ ನಾಯಕರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ರಚನೆಯಿಂದಾಗಿ ಕೆಲ ನಿರ್ಧಾರ ಕೈಗೊಳ್ಳುವಾಗ ಸ್ವಲ್ಪ ಸಮಯ ಹಿಡಿಯುತ್ತದೆ. ಸುಭದ್ರ ಸಮ್ಮಿಶ್ರ ಸರ್ಕಾರ ಐದು ವರ್ಷ ಉತ್ತಮ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.   

short by Pawan / more at Udayavani

Comments