Skip to main content


ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಸಿಗುವುದಿಲ್ಲ ಎಂಬ ಸುಳಿವು ನೀಡಿದ ಬಿಎಸ್‍‌ವೈ

ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರಕಾರದಿಂದ ಯಾವುದೇ ನೆರವು ಸಿಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸುಳಿವು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರ ಅಧಿಕಾರದಲ್ಲಿರುವ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಈ ರಾಜ್ಯಗಳ ರೈತರ ಸಾಲ ಮನ್ನಾಕ್ಕೆ ಕೇಂದ್ರ ಸರಕಾರ ಒಂದು ಪೈಸೆಯಷ್ಟು ನೆರವು ನೀಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಆರ್ಥಿಕ ಇತಿಮಿತಿಗಳನ್ನು ಅರಿತು ರೈತರ ಸಾಲ ಮನ್ನಾ ಘೋಷಣೆ ಮಾಡಬೇಕಿತ್ತು ಎಂದು ವಿವರಿಸಿದ್ದಾರೆ.   

short by Pawan / more at Vijayakarnataka

Comments