Skip to main content


ಇಂಧನ ಖಾತೆ ಕೈ ತಪ್ಪಿದ್ದಕ್ಕೆ ಡಿಕೆ ಶಿವಕುಮಾರ್ ಅಸಮಾಧಾನ

ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಎಚ್ ಡಿ ದೇವೇಗೌಡರ ಮನೆಯಲ್ಲಿ ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ ಈ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಅದರಲ್ಲೂ ವಿಶೇಷವಾಗಿ ತಾವು ಕಳೆದ ಬಾರಿ ನಿಭಾಯಿಸಿದ್ದ ಇಂಧನ ಖಾತೆಯನ್ನೇ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಶಾಸಕ, ಡಿಕೆ ಶಿವಕುಮಾರ್ ಸಿಟ್ಟಾಗಿದ್ದಾರೆ. ದೇವೇಗೌಡರ ಜತೆ ಮಾತುಕತೆ ನಡೆಸುವಾಗ ಇಂಧನ ಖಾತೆಗೆ ಲಾಭಿ ನಡೆಸದೇ ಇರುವುದಕ್ಕೆ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಖಾತೆ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವಾಗ ತಮ್ಮ್ನನು ಪರಿಗಣಿಸದೇ ಇರುವುದಕ್ಕೂ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.     

short by Pawan / more at Webdunia

Comments