Skip to main content


ಜಮೀರ್ ಅಹಮದ್ ಸಿದ್ದರಾಮಯ್ಯ ಕಾರಿಗೆ ಬೇಡಿಕೆ ಇಟ್ಟಿದ್ದೇಕೆ?

ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಎಂ 01, ಜಿ 5734 ನಂಬರ್‌ನ ಟೊಯೋಟಾ ಫಾರ್ಚೂನರ್ ಕಾರು ಬಳಸುತ್ತಿದ್ದರು. ಈಗ ಜಮೀರ್ ಅಹಮದ್ ಖಾನ್ ನನಗೆ ಅದೇ ಕಾರು ಬೇಕು ಎಂದು ಬೇಡಿಕೆ ಇಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ. ಜಮೀರ್ ಅಹಮದ್ ಖಾನ್ ಇಟ್ಟಿರುವ ಬೇಡಿಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಇನ್ನೂ ಸಿಕ್ಕಿಲ್ಲ.

ಬೆಂಗಳೂರಿನ ಚಾಮರಾಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಇನ್ನೋವಾ ಕಾರನ್ನು ನೀಡಿದೆ. ಆದರೆ, ಜಮೀರ್ ಅಹಮದ್ ಖಾನ್ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ಪತ್ರ ಬರೆದಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಬಳಸುತ್ತಿದ್ದ ಎಂ 01, ಜಿ 5734 ನಂಬರ್‌ನ ಟೊಯೋಟಾ ಫಾರ್ಚೂನರ್ ಕಾರನ್ನು ನನಗೆ ಕೊಡಿ ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

'ನಾನು ಸಿದ್ದರಾಮಯ್ಯ ಅವರು ಬಳಸುತ್ತಿದ್ದ ಎಂ 01, ಜಿ 5734 ನಂಬರ್‌ನ ಟೊಯೋಟಾ ಫಾರ್ಚೂನರ್ ಕಾರಿಗಾಗಿ ಬೇಡಿಕೆ ಇಟ್ಟಿರುವುದು ನಿಜ. ನನಗೆ ದೊಡ್ಡಗಾಡಿಯಲ್ಲಿ ಓಡಾಡಿ ಅಭ್ಯಾಸ. ಟೊಯೋಟಾ ಫಾರ್ಚೂನರ್ ಕಾರಿನಲ್ಲಿ ಸಿದ್ದರಾಮಯ್ಯ ಬಳಸುತ್ತಿದ್ದ ಕಾರು ಚೆನ್ನಾಗಿದೆ. ಅದಕ್ಕಾಗಿ ಅದನ್ನು ನೀಡಿ ಎಂದು ಕೇಳಿದ್ದೇನೆ. ಆ ಕಾರು ಲಕ್ಕಿ ಅಂತೇನಿಲ್ಲ' ಎಂದು ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.   

short by Pawan / more at Oneindia

Comments