Skip to main content


ಸಮ್ಮಿಶ್ರ ಸರ್ಕಾರದಿಂದ ದಿಟ್ಟ ಹೆಜ್ಜೆ !!! ಪೆಟ್ರೋಲ್ ಬೆಲೆ ಕಡಿಮೆಗೆ ಪ್ಲಾನ್ !!!

ಇಂಧನಗಳ ಬೆಲೆ ಏರಿಕೆಯಿಂದ ದಿಕ್ಕೆಟ್ಟಿರುವ ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಿಂದ ಸದ್ಯದಲ್ಲೇ ಸಿಹಿ ಸುದ್ದಿ ಸಿಗಲಿದೆಯೇ? ಸರ್ಕಾರದ ಮೂಲಗಳನ್ನು ನಂಬುವುದಾದರೆ ಶೀಘ್ರದಲ್ಲೇ ಜನಸಾಮಾನ್ಯರಿಗೆ ಸಂತಸದ ಸುದ್ದಿ ಸಿಗುವುದು ಖಚಿತ. ಇನ್ನು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದಕ್ಕೆ ಮನಸ್ಸು ಮಾಡುವುದಷ್ಟೇ ಬಾಕಿ ಉಳಿದಿದೆ.

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಈ ಬೆಳವಣಿಗೆಗಳ ನಡುವೆಯೇ ನಿನ್ನೆಯಷ್ಟೇ ಅಡುಗೆ ಅನಿಲ(ಎಲ್ಪಿುಜಿ) ದರವೂ ಏರಿಕೆಯಾಗಿತ್ತು. ಹೀಗೆ ಒಂದೇ ಸಮನೆ ತೈಲ ಬೆಲೆ ಏರಿಕೆಯಾಗುತ್ತಿರುವ ಪರಿಣಾಮ ಜನಸಾಮಾನ್ಯರು ತತ್ತರಿಸುವಂತಾಗಿದೆ. ಬೆಲೆ ಏರಿಕೆಯಿಂದ ಹೈರಾಣಾಗಿರುವ ರಾಜ್ಯದ ಜನತೆಗೆ ದೋಸ್ತಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಕಡಿತಗೊಳಿಸಲು ಗಂಭೀರ ಚಿಂತನೆ ನಡೆಸಿದೆ.

ಮೂರು ದಿನಗಳ ಹಿಂದಷ್ಟೇ ಕೇರಳ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ಗೆಲ 1 ರೂ. ಕಡಿತಗೊಳಿಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿತ್ತು.ಈಗ ಇದೇ ಮಾದರಿಯನ್ನು ಕರ್ನಾಟಕ ಸರ್ಕಾರ ಅನುಸರಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಆದರೆ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿದ ವಾಗ್ದಾನದಂತೆ ರೈತರು ಸಹಕಾರಿ ಬ್ಯಾಂಕ್​​ಗಳಿಂದ ಪಡೆದಿರುವ ಬೆಳೆ ಸಾಲವನ್ನು ಮನ್ನಾ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.    

short by Pawan / more at Bp9news

Comments