Skip to main content


ಬಿಜೆಪಿ ಸೇರ್ತಾರಾ ಕಾಂಗ್ರೆಸ್ ಅತೃಪ್ತರು? ಬಿಎಸ್ ವೈ ಎಸೆದ ಹೊಸ ಬಾಂಬ್!

ಕಾಂಗ್ರೆಸ್ಸಿನ ಅತೃಪ್ತ ಶಾಸಕರೆಲ್ಲ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಧಾನಸಭೆ ವಿಪಕ್ಷ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಯುವ ಮೋರ್ಚಾ ಸಭೆಯೊಂದರಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಕುರಿತು ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆಯ ಸಮಯದಲ್ಲಿ ಅನ್ಯಾಯವಾಗಿದೆ ಎಂದು ಬಂಡಾಯವೆದ್ದಿರುವ ಕೆಲ ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಅವರು ಹೊಸ ಬಾಂಬ್ ಎಸೆದಿದ್ದಾರೆ!    

short by Pawan / more at Oneindia


Comments