Skip to main content


ಪ್ರತಿಯೊಬ್ಬರ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧ : ಮೋದಿ

ರಾಜಧಾನಿ ನವದೆಹಲಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ, ಪ್ರತಿಯೊಬ್ಬರಿಗೂ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರದಿಂದ ವಸತಿ ವಲಯವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಯಾವುದೇ ಅಡ್ಡಿ-ಅಡಚಣೆಗಳಿಲ್ಲದೇ ಜನರು ತಮ್ಮ ಸ್ವಂತ ಮನೆಗಳನ್ನು ಹೊಂದಲು ಮಧ್ಯವರ್ತಿಗಳು, ಭ್ರಷ್ಟಾಚಾರದಿಂದ ವಸತಿ ವಲಯವನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದರು. ಪಿಎಂಎವೈನಿಂದ ನಮ್ಮ ನಾಗರಿಕರ ಘನತೆ-ಗೌರವ ಹೆಚ್ಚಾಗಿದೆ. ಇದರಿಂದ ನಮ್ಮ ಜನರಿಗೆ ಉದ್ಯೋಗಾವಕಾಶಗಳು ಲಭಿಸಿದೆ. ಇದೇ ವೇಳೆ ಉತ್ತಮ ಗುಣಮಟ್ಟದ ಮನೆಗಳನ್ನು ತ್ವರಿತವಾಗಿ ನಿರ್ಮಿಸಲು ಕೌಶಲ್ಯಾಭಿವೃದ್ದಿ ಕಾರ್ಯದಲ್ಲಿ ನಾವು ತೊಡಗಿದ್ದೇವೆ ಎಂದು ಪ್ರಧಾನಿ ತಿಳಿಸಿದರು.

short by Shraman / more at Ee Sanje

Comments