Skip to main content


ಸರ್ಕಾರಿ ಶಾಲೆಯ ಆಸುಪಾಸು ಖಾಸಗಿ ಶಾಲೆಗಳಿದ್ದರೆ ಪರವಾನಿಗೆ ರದ್ದು: ಡಾ. ಶಾಲಿನಿ ರಜನೀಶ್

ಧಾರವಾಡದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಹಣ ಒಸೂಲಿ ಮಾಡುತ್ತಿದ್ದಾರೆಂದು ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಇಂದು ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ, ಇದಕ್ಕಾಗಿ ಸರ್ಕಾರ ಹಲವು ಯೋಜನೆ ಜಾರಿಗೆ ತಂದರೂ ಪ್ರಯೋಜನವಾಗಲಿಲ್ಲ. ಸರ್ಕಾರಿ ಶಾಲೆಯ ಬಳಿ ಖಾಸಗಿ ಶಾಲೆಗಳಿವೆ, ಇಂತಹ ಶಾಲೆಗಳ ಪರವಾನಿಗೆ ರದ್ದು ಮಾಡಲಾಗುತ್ತದೆ. ಅಲ್ಲದೇ ರಾಜ್ಯದಲ್ಲಿ ಹಲವು ಖಾಸಗಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಇಲ್ಲ. ಇಂತಹ ಶಾಲೆಗಳ ಆಡಳಿತ ಮಂಡಳಿ ವಿರುದ್ಧವು ಕ್ರಮ ಜರುಗಿಸುತ್ತೇವೆ. ಇದಕ್ಕಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದೆನೆ ಎಂದರು. ಇನ್ನು ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹಾಗೂ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.   

short by Pawan / more at News18

Comments