Skip to main content


ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಪಿಂಚಣಿ ನೀಡುವ ಭರವಸೆಗೆ ಬದ್ಧ, ಸಿ ಎಂ ಘೋಷಣೆ

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ನೀಡುವ ಭರವಸೆ ನೀಡಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದು ಮುಂದಿನ ಬಜೆಟ್ ನಲ್ಲಿ ಜಾರಿಗೆ ತರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಘೋಷಿಸಿದರು. ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ಅವರು ಕಾಲೇಜು ಶಿಕ್ಷಣ ಪಡೆದ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ನಾನು ಎಂದೂ ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ. ಚುನಾವಣೆಯ ವೇಳೆ ಹಿರಿಯ ನಾಗರಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರುತ್ತೇನೆ ಎಂದು ಆಶ್ವಾಸನೆ ಕೊಟ್ಟಿದ್ದು ನನ್ನ ಆಂತರಿಕ ಒತ್ತಾಯದಿಂದ. ಆಸ್ಪತ್ರೆಗಳು ಬಹಳ ಕೆಟ್ಟ ಪರಿಸ್ಥಿತಿಯಲ್ಲಿವೆ. ಹಾಗಾಗಿ ಒಂದು ಬಡ ಕುಟುಂಬ 10 ರಿಂದ 20 ಲಕ್ಷ ಹಣವನ್ನು ಆರೋಗ್ಯ ಕಾಪಾಡಿಕೊಳ್ಳಲು ಖರ್ಚು ಮಾಡುವ ಸ್ಥಿತಿಯಲ್ಲಿ ಇಲ್ಲ. ನಾನು ಮಾಡಿದ ಈ ಘೋಷಣೆಯನ್ನು ನಿಲ್ಲಿಸುವುದಿಲ್ಲ ಎಂದರು.         

short by Pawan / more at Kannada News Now

Comments