Skip to main content


ಅಡ್ವಾಣಿ ಕಣಕ್ಕಿಳಿಸಲು ಮೋದಿ ಮಾಸ್ಟರ್ ಪ್ಲಾನ್

ಬಿಜೆಪಿ ತನ್ನ ಸಂಸದರು ಹಾಗೂ ಶಾಸಕರಿಗೆ ವಿಧಿಸಿದ್ದ ವಯಸ್ಸಿನ ನಿರ್ಬಂಧವನ್ನು ಸಡಿಲಗೊಳಿಸಲು ನಿರ್ಧರಿಸಿದೆ. 2019ರ ಲೋಕಸಭಾ ಚುನಾವಣೆಗೆ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲು ಮುಂದಾಗಿದೆ. ವರದಿಯೊಂದರ ಪ್ರಕಾರ ಲಾಲ್ ಕೃಷ್ಣ ಅಡ್ವಾಣಿಯವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎನ್ನಲಾಗಿದೆ. ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ ಸೇರಿದಂತೆ ಹಿರಿಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ಹೇಳಿವೆ. ದೆಹಲಿಯಲ್ಲಿರುವ 90 ವರ್ಷದ ಅಡ್ವಾನಿ ಮನೆಗೆ ಭೇಟಿ ನೀಡಿದ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಈ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.   

short by Pawan / more at Kannadadunia

Comments