Skip to main content


ಮಂಡ್ಯ ಜಿಲ್ಲೆಯ ಹಳ್ಳಿಯನ್ನು ದತ್ತು ಪಡೆದ ನೀನಾಸಂ ಸತೀಶ್

‘ಅಯೋಗ್ಯ’ ಸಿನಿಮಾ ಚಿತ್ರೀಕರಣ ಪೂರ್ಣಗೊಂಡು ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ಪ್ರಮೋಷನ್‍ಗೆ ಮುಂದಾಗಬೇಕಾಗಿದ್ದ ಚಿತ್ರದ ನಾಯಕ ನೀನಾಸಂ ಸತೀಶ್ ಬೇರೆಯದ್ದೇ ಕೆಲಸವೊಂದಕ್ಕೆ ಕೈ ಹಾಕಿದ್ದಾರೆ. 'ನಾನೊಂದು ಹೊಸ ಕೆಲಸ ಮಾಡಲು ಮುಂದಾಗಿದ್ದೇನೆ, ಹೊಸ ಪ್ರಯಾಣ, ಹೊಸ ಯೋಜನೆ’ ಸದ್ಯದಲ್ಲೇ ನಿಮಗೆ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಈ ಹಿಂದೆ ನಟ ಸತೀಶ್ ಫೆಸ್‍ಬುಕ್ ಲೈವ್‍ನಲ್ಲಿ ಹೇಳಿಕೊಂಡಿದ್ದರು. ಇಂದು ಆ ಹೊಸ ಹೆಜ್ಜೆಯ ಬಗ್ಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಹಳ್ಳಿಯಿಂದ ಬಂದಿರುವ ಸತೀಶ್ ಅವರು ಹಳ್ಳಿಗಳಿಗಾಗಿ ಏನಾದರೂ ಮಾಡಬೇಕು ಎನ್ನುವ ಹಂಬಲದಿಂದ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಲ ಹಳ್ಳಿಯನ್ನು ಸತೀಶ್ ಅವರು ದತ್ತು ಪಡೆದುಕೊಂಡಿದ್ದಾರೆ. ಹಳ್ಳಿಗಳ ಸಮಸ್ಯೆಯನ್ನು ಬಗೆಹರಿಸಿ, ಆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಬೇಕೆಂಬ ಆಶಯದೊಂದಿಗೆ ಮಹತ್ವದ ಕೆಲಸವೊಂದಕ್ಕೆ ಕೈಹಾಕಿದ್ದಾರೆ. ಈ ವಿಷ್ಯವನ್ನ ಖುದ್ದು ಸತೀಶ್ ಅವರೇ ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.   

short by Pawan / more at Public Tv

Comments