Skip to main content


ಕರಾವಳಿಯಲ್ಲಿ ನಾಳೆ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಕರಾವಳಿ ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಾಳೆ (ಜೂ.12) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಕರಾವಳಿ, ಕೇರಳದ ಕೆಲವು ಪ್ರದೇಶಗಳು, ಛತ್ತೀಸ್‍ಗಢ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಂ ಹಾಗೂ ತ್ರಿಪುರಾದಲ್ಲಿ ಜೂನ್ 12ರಂದು ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋವಾ, ಕೇರಳ ಹಾಗೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದ ರಭಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಿದೆ.   

short by Pawan / more at Public Tv

Comments