Skip to main content


ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹುದ್ದೆಗೆ ಕಂಟಕ?

ಇದಕ್ಕೆ ಕಾರಣ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ. ಮೈಸೂರಿನ ಶೇಖರ್ ಅಯ್ಯರ್ ಎಂಬವರು ಈ ಅರ್ಜಿ ಸಲ್ಲಿಸಿದ್ದು, ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬ ಹುದ್ದೆಯೇ ಇಲ್ಲ. ಹಾಗಾಗಿ ಅದನ್ನು ರದ್ದು ಮಾಡಬೇಕೆಂದು ಮನವಿ ಮಾಡಿದ್ದಾರೆ. ಶೇಖರ್ ಅಯ್ಯರ್ ಅವರ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಅಂಗೀಕಾರವಾಗಿದೆ ಎಂದು ತಿಳಿದುಬಂದಿದ್ದು, ಹೈಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.    

short by Pawan / more at Kannadadunia

Comments