Skip to main content


ಡಿ.ಕೆ.ಶಿವಕುಮಾರ್‌ ಮತ್ತೆ ವಿಚಾರಣೆ ಸಂಭವ?

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಆದಾಯ ತೆರಿಗೆ ಇಲಾಖೆ (ಐ.ಟಿ) ಅಧಿಕಾರಿಗಳು ಪುನಃ ಸುದೀರ್ಘ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಸಚಿವರು ಹಾಗೂ ಅವರ ಆಪ್ತರಿಗೆ ಮನೆಗಳ ಮೇಲೆ ಕಳೆದ ವರ್ಷ ದಾಳಿ ನಡೆಸಿದ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಮಹತ್ವದ ದಾಖಲೆಗಳು ಹಾಗೂ ಭಾರಿ ಹಣದ ಮೂಲ ಕುರಿತು ಸಮಗ್ರ ವಿಚಾರಣೆ ನಡೆಸಿದ್ದಾರೆ. ಆದರೆ, ಅಧಿಕಾರಿಗಳು ಕೇಳಿದ ಬಹಳಷ್ಟು ಪ್ರಶ್ನೆಗಳಿಗೆ ಶಿವಕುಮಾರ್‌ ಸಮರ್ಪಕ  ಉತ್ತರ ನೀಡಿಲ್ಲ. ಹೀಗಾಗಿ, ಅವರನ್ನು ಪುನಃ ವಿಚಾರಣೆಗೆ ಒಳಪಡಿಸುವ ಸಂಭವ ಇದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.   

short by Pawan / more at Prajavani

Comments