Skip to main content


ಬ್ರೇಕಿಂಗ್ : 'ಕಾಲಾ' ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ರಜನಿಕಾಂತ್ ನಟನೆಯ ಕಾಲಾ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅಡ್ಡಿಪಡಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಅರ್ಜಿದಾರರ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಜಿ ನರೇಂದ್ರ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಕಲ್ಪಿಸುವಂತೆ ಗೃಹ ಇಲಾಖೆಗೆ ನಿರ್ದೇಶನ ನೀಡಿದೆ. ಅಂದಹಾಗೆ, ಕಾಲಾ ಚಿತ್ರದ ನಿರ್ಮಾಣ ಸಂಸ್ಥೆ ವೆಂಡರ್ ಬಾರ್ ಫಿಲಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹಾಗೂ ನಿರ್ಮಾಪಕರಾದ ರಜನಿಕಾಂತ್ ಪುತ್ರಿ ಐಶ್ವರ್ಯಾ ಮತ್ತು ಅಳಿಯ ಧನುಷ್ ಹೈಕೋರ್ಟ್ ನಲ್ಲಿ ಅರ್ಜಿಸಲ್ಲಿಸಿದ್ದರು.

short by Shraman / more at Kannada News Now

Comments