Skip to main content


ಧೋನಿ ವಿರಾಮದ ಸಮಯವನ್ನು ಯಾರ ಜತೆ ಕಳೆಯುತ್ತಾರೆ?

ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಜನಪ್ರಿಯ ಕ್ರಿಕೆಟಿಗ ಎಂಬುದರಲ್ಲಿ ಸಂಶಯವೇ ಇಲ್ಲ. ಆಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿರುವ ಮಹಿ, ಸದ್ಯ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮಾತ್ರ ತಲ್ಲೀನವಾಗಿದ್ದಾರೆ. ಐಪಿಎಲ್ ಮುಗಿದ ಬಳಿಕ ನಾಯಕ ಧೋನಿ ಈಗ ರಾಂಚಿಯ ತಮ್ಮ ಮನೆಯಲ್ಲಿ ವಿಶ್ರಾಂತಿಯ ದಿನಗಳನ್ನು ಕಳೆಯುತ್ತಿದ್ದಾರೆ. ಅಷ್ಟಕ್ಕೂ ಧೋನಿ ಬಿಡುವಿನ ಸಮಯವನ್ನು ಹೇಗೆ ಕಳೆಯುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲೂ ಇರಬಹುದು. ಬೆಳಗ್ಗೆ ಎದ್ದ ಕೂಡಲೇ ತಮ್ಮ ಮೆಚ್ಚಿನ ಸಾಕು ನಾಯಿಗಳ ಜತೆ ಜಾಗಿಂಗ್‌ಗೆ ಹೊರಡುತ್ತಾರೆ. ಇದನ್ನು ಸ್ವತ: ಮಹಿ ಅವರೇ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.

short by Shraman / more at Vijaya Karnataka

Comments