Skip to main content


ಕಾಂಗ್ರೆಸ್ ನಲ್ಲಿ ಒಡಕು, ಜೆಡಿಎಸ್ ನಲ್ಲಿ ಬಿಕ್ಕಟ್ಟು, ಬಿಜೆಪಿಯಲ್ಲಿ ಒಗ್ಗಟ್ಟು

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರಚನೆಯಾದ ದಿನದಿಂದ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಬಿಕ್ಕಟ್ಟು ಮುಂದುವರೆದಿದೆ. ಇನ್ನು ಜೆಡಿಎಸ್ ನಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಇದ್ದು, ಕೇವಲ ಭಾರತೀಯ ಜನತಾ ಪಕ್ಷದಲ್ಲಿ ಒಗ್ಗಟ್ಟು ಕಾಣಿಸುತ್ತಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವರಾದ ಅನಂತಕುಮಾರ್ ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ವ್ಯಾಖ್ಯಾನಿಸಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರದ ಬಹಿರಂಗ ಪ್ರಚಾರದ ಕೊನೆಯ ದಿನವಾದ ಶನಿವಾರ, ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ದಕ್ಷಿಣ ಶಾಸಕರಾದ ಎಂ ಕೃಷ್ಣಪ್ಪ, ಅಭ್ಯರ್ಥಿ ಬಿ.ಎನ್ ಪ್ರಹ್ಲಾದ್, ಮಾಜಿ ಮಹಾಪೌರರಾದ ಎಸ್ ಕೆ ನಟರಾಜ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.     

short by Pawan / more at Oneindia

Comments