Skip to main content


ಕೊಡಗು ಪ್ರವಾಹದಿಂದ 3 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ

ಕೊಡಗಿನಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತ ಮುಂತಾದವುಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂಬುದಾಗಿ ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. ಕೊಡಗಿನಲ್ಲಿ ಪ್ರವಾಹ ದುರಂತದಿಂದ ಮೂರು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ನೆರವಾಗಲು 2 ಸಾವಿರ ಕೋಟಿ ರೂ. ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರು ಮತ್ತು ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.      

short by Pawan / more at Oneindia

Comments