Skip to main content


ಕೇರಳಕ್ಕೆ ಫುಟ್ಬಾಲ್ ಸ್ಟಾರ್ ರೊನಾಲ್ಡೋ 77 ಕೋಟಿ ದೇಣಿಗೆ !

ಪ್ರಖ್ಯಾತ ಪೋರ್ಚುಗಲ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಕೇರಳ ನೆರೆ ಸಂತ್ರಸ್ತರಿಗಾಗಿ 77 ಕೋಟಿ ರು. ದೇಣಿಗೆ ನೀಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸದ್ಯ ಈ ಸಂದೇಶ ವೈರಲ್ ಆಗುತ್ತಿದೆ. ಅಲ್ಲದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಕೇರಳ ಸರ್ಕಾರಗಳು ನೀಡಿರುವ ತುರ್ತುನಿಧಿಗೆ ಹೋಲಿಸಿ ಟೀಕೆ ಮಾಡಲಾಗುತ್ತಿದೆ. ಷಿಯಲ್ ಮೀಡಿಯಾದಲ್ಲಿ ರೊನಾಲ್ಡೋ ಅವರ ಫೋಟೋವನ್ನು ಪೋಸ್ಟ್ ಮಾಡಿ, ‘ರೊನಾಲ್ಡೋರನ್ನು ಜನ ಯಾಕೆ ಇಷ್ಟಪಡುತ್ತಾರೆ ಎಂಬುದಕ್ಕೆ ಉತ್ತರ ಇಲ್ಲಿದೆ. ಕೇರಳ ಪ್ರವಾಹ ಸಂತ್ರಸ್ತರಿಗೆ ರೊನಾಲ್ಡೋ 77 ಕೋಟಿ ನೀಡಿದ್ದಾರೆ’ ಎಂದು ಒಕ್ಕಣೆ ಬರೆದಿದ್ದಾರೆ.   

short by Pawan / more at Suvarna News

Comments